ಬೆಂಗಳೂರು :
ರಾಜ್ಯ ಸಮ್ಮಿಶ್ರ ಸರಕಾರದ 11 ಶಾಸಕರು ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರವನ್ನು ಉರುಳಿಸಲು ಯತ್ನಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಅಮೆರಿಕಾ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಒಂದು ದಿನ ಮುಂಚಿತವಾಗಿಯೇ ಭಾರತಕ್ಕೆ ವಾಪಾಸ್ ಬರುತ್ತಿದ್ದಾರೆಂದು ತಿಳಿದುಬಂದಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಕ್ಷಣಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿರುವ ಕುಮಾರಸ್ವಾಮಿ, ಈಗಾಗಲೇ ನ್ಯೂಜೆರ್ಸಿಯಿಂದ ನ್ಯೂಯಾರ್ಕ್ ಗೆ ತೆರಳುತ್ತಿದ್ದಾರೆಂದು ಹೇಳಲಾಗಿದೆ. ನ್ಯೂಯಾರ್ಕ್ ನಿಂದ ನವದೆಹಲಿಗೆ ಬರಲಿರುವ ಸಿಎಂ ಬಳಿಕ ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ವಿದೇಶದಲ್ಲಿದ್ದು, ಅವರೂ ಕೂಡಾ ಪ್ರವಾಸ ಮೊಟಕುಗೊಳಿಸಿ ಬೆಂಗಳೂರಿಗೆ ಹಿಂದಿರುಗುತ್ತಿದ್ದಾರೆಂದು ಹೇಳಲಾಗಿದೆ.
ಇದಲ್ಲದೇ ಕೂಡಲೇ ಬೆಂಗಳೂರಿಗೆ ತೆರಳಿ ರಾಜಕೀಯ ವಿಧ್ಯಮಾನಗಳ ಬಗ್ಗೆ ಮಾಹಿತಿ ಪಡೆಯುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರಿಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ನಡುವೆ ಶಾಸಕರ ರಾಜೀನಾಮೆಯಿಂದ ಕಂಗಾಲಾಗಿರುವ ಕಾಂಗ್ರೆಸ್ ನಾಯಕರು ಅತೃಪ್ತ ಶಾಸಕರ ಮನವೊಲಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ