ಉಡುಪಿ:
ನಾನು ಯಾವುದೇ ರೀತಿಯ ತಪ್ಪನ್ನು ಮಾಡಿಲ್ಲ. ನನಗೆ ಎಲ್ಲವನ್ನೂ ಎದುರಿಸುವ ಸಾಮರ್ಥ್ಯವಿದೆ. ಆದರೆ ಬಿಜೆಪಿ ಮುಖಂಡ ಕುಮಾರ್ ಬಂಗಾರಪ್ಪನ ಅಭಿರುಚಿ ಪ್ರದರ್ಶನವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ನಾನು ಚುನಾವಣೆ ಸಂದರ್ಭದಲ್ಲಿ ಪರ್ಸನಲ್ ವಿಚಾರದ ಬಗ್ಗೆ ಚರ್ಚೆ ಮಾಡಲು ಹೋಗಲ್ಲ. ರಾಜಕೀಯ ವಿಚಾರ ಇದ್ದರೆ ಚರ್ಚೆ ಮಾಡೋಣ. ಅದನ್ನು ಬಿಟ್ಟು ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ರಾಜಕೀಯ ಮಾಡುವುದು ಬೇಡ. ಚುನಾವಣೆ ಸಂದರ್ಭದಲ್ಲಿ ವೈಯಕ್ತಿಕ ವಿಚಾರದ ಬಗ್ಗೆ ಚರ್ಚೆ ಮಾಡುವುದಿಲ್ಲ. ಅವರ ಆರೋಪದ ಬಗ್ಗೆ ನಾನು ಮಾತನಾಡುವುದಿಲ್ಲ. ಎಂದು ಪ್ರತಿಕ್ರಿಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ