ಬೆಂಗಳೂರು:
‘ನಾನು ಮಾಧ್ಯಮಗಳಿಗೆ ಬಹಿಷ್ಕಾರ ಹಾಕಿದ್ದೇನೆ’ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ಯವರು ಮತ್ತೊಮ್ಮೆ ಮಾಧ್ಯಮಗಳ ಮೇಲೆ ತಮ್ಮ ಕೋಪ ತೋರ್ಪಡಿಸಿದ್ದಾರೆ.
ಖಾಸಗಿ ಹೋಟೆಲ್‌ನಲ್ಲಿ ದೋಸ್ತಿ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ರವರನ್ನು ಭೇಟಿ ಮಾಡಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಸಭೆ ಮುಗಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿಎಂ ಕುಮಾರಸ್ವಾಮಿ, ನಿಮ್ಮಲ್ಲಿನ ಚರ್ಚೆ, ಸುದ್ದಿಗಳಿಂದ ನಾನು ಮಾಧ್ಯಮಗಳಿಗೆ ಬಹಿಷ್ಕಾರ ಹಾಕಿದ್ದೇನೆ ( ಐ ಯಮ್ ಬಾಯ್ಕಟಿಂಗ್ ಯುವರ್ ಸೆಲ್ಫ್ )ಅದೇನು ಸ್ಟೋರಿನೋ, ಅದೇನು ಚರ್ಚೆ ಮಾಡ್ತೀರೋ ಮಾಡಿಕೊಳ್ಳಿ, ಮಜಾ ಮಾಡಿ. ನಾನು ನಿಮ್ಮ ಜೊತೆ ಮಾತನಾಡಬಾರದು ಎಂದು ತೀರ್ಮಾನ ಮಾಡಿದ್ದೇನೆ ಎಂದು ತಿಳಿಸಿ ತೆರಳಿದ್ದಾರೆ.
ಚರ್ಚೆಯಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ, ಕೆಲ ಶಾಸಕರ ಬಂಡಾಯ, ಬಿಜೆಪಿಯ ಆಪರೇಷನ್ ಕಮಲ, ಲೋಕಸಭಾ ಚುನಾವಣೆ ಕ್ಷೇತ್ರವಾರು ಫಲಿತಾಂಶ, ಆಪರೇಷನ್ ಕಮಲ ತಡೆಯಲು ಮಾಡಿಕೊಳ್ಳಬೇಕಾದ ತಂತ್ರಗಳು ಹಾಗೂ ಉಪ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಮಾಡಿಕೊಳ್ಳಬೇಕಾದ ತಂತ್ರಗಳ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಭಾಗಿಯಾಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/04/kumarasw.gif)