ಹಾಸನ :
ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ವಾಹನವನ್ನು ತಡೆದು ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಇಂದು ತಪಾಸಣೆ ನಡೆಸಿದ್ದಾರೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಚೆಕ್ ಪೋಸ್ಟ್ ನಲ್ಲಿ ಚುನಾವಣೆ ಕರ್ತವ್ಯ ನಿರತ ಅಧಿಕಾರಿಗಳುಸಿಎಂ ಕಾರು ಬರುತ್ತಿದ್ದಂತೆಯೇ, ಅದನ್ನು ತಡೆದು ಪೊಲೀಸ್ ಹಾಗೂ ಚುನಾವಣಾ ಸಿಬ್ಬಂದಿ ವಾಹನವನ್ನು ತಪಾಸಣೆ ನಡೆಸಿದ್ದಾರೆ.
ಇಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣಕ್ಕೆ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು, ಶಿವಮೊಗ್ಗಕ್ಕೆ ಹೋಗೋ ಮಾರ್ಗ ಮಧ್ಯೆ ಇರುವ ಸ್ಥಳೀಯ ಜೆಡಿಎಸ್ ಶಾಸಕರ ಮನೆಗೆ ಭೇಟಿ ನೀಡಿದರು. ಅಲ್ಲಿ ಉಪಹಾರ ಸೇವಿಸಿ ಬಳಿಕ ಕಾರ್ಯಕರ್ತರೊಂದಿಗೆ ಚರ್ಚಿಸಿ ಬಳಿಕ ಅರಸೀಕೆರೆ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳಲಿದ್ದಾರೆ. ಸಿಎಂ ಕುಮಾರಸ್ವಾಮಿ ಮಲೆನಾಡು, ಕರಾವಳಿ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ