ಚಿಕ್ಕನಾಯಕನಹಳ್ಳಿ:
ಪ್ರಚಾರದ ಭರದಲ್ಲಿ ಸಿಎಂರಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಹಲವು ಯೋಜನೆಗಳ ಘೋಷಣೆ ಮಾಡುವ ಮೂಲಕ ಸಿಎಂ ಕುಮಾರಸ್ವಾಮಿ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ.
ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು, ಒಣಗಿ ಹೋದ ತೆಂಗಿನ ಮರಕ್ಕೆ 400 ರೂ ಪರಿಹಾರ ಈಗಾಗಲೇ ಕೊಡುತಿದ್ದೇವೆ. ಅದು ಸಾಕಾಗಲ್ಲ ಎಂದು ಹೇಳಿದರು, ಇದಕ್ಕೆ ಉತ್ತರಿಸಿದ ಸಿಎಂ , ಜಯಚಂದ್ರ ಅವರು 400 ರಿಂದ 1000 ರೂ. ಗೆ ಏರಿಕೆ ಮಾಡಬೇಕು ಅಂದಿದ್ದಾರೆ. ಆ ಕುರಿತು ಚುನಾವಣೆ ಮುಗಿದ ಬಳಿಕ ನೋಡೋಣ ಎಂದು ಪರೋಕ್ಷವಾಗಿ 1000 ರೂ. ಕೊಡುವ ಭರವಸೆ ಸಿಎಂ ನೀಡಿದರು.
ಅಲ್ಲದೇ ಭದ್ರಾ ಮೇಲ್ದಂಡೆ ನೀರನ್ನು ಶಿರಾ ಚಿಕ್ಕನಾಯಕನಹಳ್ಳಿಗೆ ಹರಿಸುತ್ತೇನೆ. 8 ರಿಂದ 10 ತಿಂಗಳ ಅವಕಾಶ ಕೊಡಿ. ಚಿಕ್ಕನಾಯಕನಹಳ್ಳಿ ತಾಲೂಕಿನ ಕೆರೆಕಟ್ಟೆ ತುಂಬಿಸುವ ಕೆಲಸ ಮಾಡಬೇಕಿದೆ. ನೀತಿ ಸಂಹಿತೆ ಇರುವುದರಿಂದ ಹೆಚ್ಚಿಗೆ ಹೇಳಿಕೆ ಆಗೋಲ್ಲ ಎಂದಿದ್ದರು. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ