ಕೊಡಗಿನಲ್ಲಿ 800 ಮರಗಳ ಕಡಿತಕ್ಕೆ ಬ್ರೇಕ್!!!

ಬೆಂಗಳೂರು:

     ಕೊಡಗಿನಲ್ಲಿ ರೆಸಾರ್ಟ್ ನಿರ್ಮಾಣಕ್ಕಾಗಿ 800 ಮರಗಳನ್ನು ಕಡಿಯುವುದನ್ನು ಕೂಡಲೇ ನಿಲ್ಲಿಸುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

      ಆಂಧ್ರ ಮೂಲದ ಉದ್ಯಮಿಯೊಬ್ಬರಿಗೆ ಬೃಹತ್ ಮರ, ಬೆಟ್ಟ ಗುಡ್ಡಗಳಿಂದ ಈ ಜಾಗದಲ್ಲಿ 30 ಎಕರೆಯನ್ನು ಅಭಿವೃದ್ಧಿಪಡಿಸಿ ಹೌಸಿಂಗ್ ಬೊರ್ಡ್ ಗೆ ಕೊಡುತ್ತೇವೆ. ಆ 30 ಎಕರೆಯಲ್ಲಿರುವ ಮರಗಳನ್ನು ಕಡಿಯಲು ಅನುಮತಿ ಕೊಡಿ ಎಂದು ಜಾಗದ ಮಾಲೀಕ ಅನುಮತಿ ಕೇಳಿದ್ದ ರೆಸಾರ್ಟ್ ನಿರ್ಮಾಣ ಮಾಡಲು ಬರೋಬ್ಬರಿ 800 ಮರಗಳನ್ನು ಕಡಿಯುವುದಕ್ಕೆ ಸ್ವತಃ ಅರಣ್ಯ ಇಲಾಖೆ ಒಪ್ಪಿಗೆ ನೀಡಿತ್ತು.

      ಅರಣ್ಯ ಇಲಾಖೆ ನೀಡಿದ್ದ ಅನುಮತಿ ಮೇರೆಗೆ ಕೊಡಗಿನ ಕೆ.ನಿಡುಗಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೆಸಾರ್ಟ್ ನಿರ್ಮಾಣ ಮಾಡಲು ಕೊಡಗಿನಲ್ಲಿ ಬರೋಬ್ಬರಿ 800 ಮರಗಳನ್ನು ಕಡಿಯುತ್ತಿರುವ ಬಗ್ಗೆ ಮಾಧ್ಯಮಗಳು ವರದಿ ಬಿತ್ತರ ಮಾಡಿದ್ದವು. ಮಾಧ್ಯಮಗಳಲ್ಲಿ ಬಿತ್ತರವಾಗಿರುವ ವರದಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದೇ ಮರಗಳನ್ನು ಕಡಿಯುವುದನ್ನು ನಿಲ್ಲಿಸಿ, ವರದಿಯನ್ನು ನೀಡುವಂತೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚಿಸಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link