ಚಿತ್ರದುರ್ಗ :
ಎರಡು – ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳುವ ಮೂಲಕ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಸಂಬಂಧ ಇಂದು ಬಿಜೆಪಿ ವರಿಷ್ಠರೊಂದಿಗೆ ಚರ್ಚೆ ಮಾಡಲಿದ್ದೇನೆ. ಇನ್ನೆರಡು ಅಥವಾ ಮೂರು ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದರು.
ಸಂಪುಟದಲ್ಲಿ ಯಾರಿಗೆ ಸ್ಥಾನ ನೀಡಬೇಕು ಎಂಬುದು ವರಿಷ್ಠರು ನಿರ್ಧರಿಸಲಿದ್ದು, ಶಿವಮೊಗ್ಗ ಪ್ರವಾಸದ ಬಳಿಕ ಬೆಂಗಳೂರಿಗೆ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಗ್ನನಾಗಲಿದ್ದೇನೆ ಎಂದು ಹೇಳಿದ್ದಾರೆ. ಈ ಮೂಲಕ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
