ಮಾಲಿನ್ಯ ನಿಯಂತ್ರಣ ಮಂಡಳಿ ಡಿಜಿಟಲ್ ಅಭಿಯಾನಕ್ಕೆ ಸಿಎಂ ಮೆಚ್ಚುಗೆ!

ಬೆಂಗಳೂರು:

 

      ವಿಶ್ವ ಪರಿಸರ ದಿನಾಚರಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಹಮ್ಮಿಕೊಂಡಿರುವ ಡಿಜಿಟಲ್ ಅಭಿಯಾನ 25 ಲಕ್ಷಕ್ಕೂ ಹೆಚ್ಚು ಜನರನ್ನು ತಲುಪಿರುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

      ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಬಾರಿ ಪರಿಸರ ದಿನಾಚರಣೆಯ ವಿಷಯ “ಜೀವ ವೈವಿಧ್ಯ”. ಜೀವ ವೈವಿಧ್ಯ ಇದ್ದಾಗ ಮಾತ್ರ ಪರಿಸರ ಸಮತೋಲನ ಕಾಪಾಡಲು ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

      ಇತ್ತೀಚೆಗೆ ಕೋವಿಡ್ 19ರ ನಿಯಂತ್ರಣಕ್ಕಾಗಿ ಲಾಕ್ ಡೌನ್ ಘೋಷಣೆಯಿಂದಾಗಿ ಪರಿಸರ ಮಾಲಿನ್ಯ ಗಣನೀಯವಾಗಿ ಕಡಿಮೆಯಾಗಿರುವುದು ಸಮಾಧಾನಕರ ವಿಷಯ ಎಂದು ಅವರು ತಿಳಿಸಿದರು.

      ಸಮಾರಂಭದಲ್ಲಿ ಪರಿಸರ ಗೀತೆ, ಯೂಟ್ಯೂಬ್ ಚಾನಲ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಬಳಕೆದಾರ ಸ್ನೇಹಿ ವೆಬ್ ಸೈಟಿಗೆ ಚಾಲನೆ ನೀಡಲಾಯಿತು.

      ಅರಣ್ಯ ಸಚಿವ ಆನಂದ್ ಸಿಂಗ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ವಿಜಯ್ ಕುಮಾರ್ ಗೋಗಿ, ಸದಸ್ಯ ಕಾರ್ಯದರ್ಶಿ ಶ್ರೀನಿವಾಸುಲು ಮೊದಲಾದವರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap