ಬೆಂಗಳೂರು:
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಬೆಂಗಾವಲು ವಾಹನ ಡಿಕ್ಕಿಯಾಗಿದ್ದು, ಆಟೋ ಚಾಲಕ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ರಾಜಧಾನಿಯಿಂದ ತುಮಕೂರಿನ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾರ್ಯದರ್ಶಿ ಸೆಲ್ವಕುಮಾರ್ ಇದ್ದ ಬೆಂಗಾವಲು ಪಡೆಯ ಕೊನೆಯ ವಾಹನ ಯಶವಂತಪುರ ಫ್ಲೈ ಓವರ್ ಮೇಲೆ ನಿಯಂತ್ರಣ ತಪ್ಪಿ ಮೊದಲು ಆಟೋಗೆ ಡಿಕ್ಕಿ ಹೊಡೆಯಿತು. ಬಳಿಕ ಡಿವೈಡರ್ ದಾಟಿ ಎದುರಿಗೆ ಬರುತ್ತಿದ್ದ ಕ್ಯಾಂಟರ್ಗೂ ಡಿಕ್ಕಿ ಹೊಡೆದಿದೆ. ಕ್ಯಾಂಟರ್ನ ಅಡಿಯಲ್ಲಿ ಇನ್ನೋವಾ ವಾಹನ ಸಿಕ್ಕಿಬಿತ್ತು.
ಅಪಘಾತಕ್ಕೆ ತುತ್ತಾದ ಕಾರು ಚಾಲಕನಿಗೆ ಗಾಯಗಳಾಗಿವೆ. ಇನ್ನೋವಾ ವಾಹನ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಯ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ