ಶಿವಮೊಗ್ಗ:
ಬಿಜೆಪಿಯಿಂದ ಅನರ್ಹ ಶಾಸಕರಿಗೆ ಟಿಕೆಟ್ ನೀಡುವುದು ಖಚಿತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಜಿಲ್ಲೆಯ ಶಿಕಾರಿಪುರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಉಪ ಚುನಾವಣೆ ದಿನಾಂಕ ಈಗಾಗಲೇ ನಿಗದಿಯಾಗಿದ್ದು, ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡಲಾಗುವುದು. ಅವರಿಗೆ ಪಕ್ಷದ ಟಿಕೆಟ್ ನೀಡಲು ರಾಷ್ಟ್ರೀಯ ಅಧ್ಯಕ್ಷರು ನಿರ್ಧಾರ ಮಾಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರು ಹಾಗೂ ನಾನು ಚರ್ಚಿಸಿ ಈಗಾಗಲೇ ನಿರ್ಧಾರ ಮಾಡಿದ್ದೇವೆ. ಅನರ್ಹ ಶಾಸಕರನ್ನು ನಿಲ್ಲಿಸಿ, ಗೆಲ್ಲಿಸುವ ಜವಾಬ್ದಾರಿಯು ನಮ್ಮ ಮೇಲಿದೆ” ಎಂದು ಅನರ್ಹರಿಗೆ ಭರವಸೆ ನೀಡಿದ್ದಾರೆ.
ಇನ್ನು ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲಾಗುವುದು. ಈ ಕುರಿತು ಮುಂದಿನ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆ ನಡೆಸುವುದಾಗಿ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ