ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ, ಕೇಂದ್ರ ಸರ್ಕಾರ ಮದ್ಯಪ್ರವೇಶಕ್ಕೆ ಮನವಿ : ಸಿಎಂ

ಬೆಂಗಳೂರು:

Image result for ರಾಯಚೂರು ಉಷ್ಣ ಸ್ಥಾವರ

      ರಾಜ್ಯದಲ್ಲಿ ಕಲ್ಲಿದ್ದಲಿಗೆ ಭೀಕರ ಬರ ಎದುರಾಗಿದೆ, ಹೀಗಾಗಿ ಕೇಂದ್ರ ಸರ್ಕಾರಕ್ಕೆ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಲಾಗಿದೆ ಎಂದು ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

      ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಕೊರತೆ ಉಂಟಾಗಿದ್ದು, 1720 ಮೆಗಾವ್ಯಾಟ್ ಸಾಮರ್ಥ್ಯದ ರಾಯಚೂರು ಉಷ್ಣ ಸ್ಥಾವರದಲ್ಲಿ ಶೂನ್ಯ ಕಲ್ಲಿದ್ದಲು ಸಂಗ್ರಹಣೆ ಇದೆ ಎಂದು ತಿಳಿಸಿದ್ದಾರೆ. 

      ಕೇಂದ್ರ ಸರ್ಕಾರಿ ಸ್ವಾಮ್ಯದ ವೆಸ್ಟರ್ನ್ ಕೋಲ್ ಫೀಲ್ಡ್ಸ್ (WLC) ರವರು ಕಲ್ಲಿದ್ದಲು ಪೂರೈಕೆ ಒಪ್ಪಂದದ ಪ್ರಕಾರ ನೀಡ ಬೇಕಾಗಿದ್ದ ಕಲ್ಲಿದ್ದಲಿನ ಒಟ್ಟು ಪ್ರಮಾಣದಲ್ಲಿ ಸುಮಾರು 6 ಲಕ್ಷ ಟನ್ ಗಳಷ್ಟು ಕಲ್ಲಿದ್ದಲನ್ನು ಈವರೆಗೆ ಪೂರೈಕೆ ಮಾಡದಿರುವುದೇ ಈ ಸ್ಥಿತಿಗೆ ಕಾರಣ ಎಂದು ತಿಳಿಸಿದ್ದಾರೆ. 

      ಈ ಪ್ರಮಾಣದ ಕೊರತೆಯನ್ನು ಕೇಂದ್ರ ಸರ್ಕಾರಿ ಸ್ವಾಮ್ಯದ ಎಂ.ಸಿ.ಎಲ್ ಮುಖಾಂತರ ಪೂರೈಕೆ ಮಾಡಬೇಕೆಂದು ಕೇಂದ್ರ ಕಲ್ಲಿದ್ದಲು ಸಚಿವರಾದ ಪಿಯೂಷ್ ಗೋಯಲ್ ರವರನ್ನು ಪತ್ರ ಮುಖೇನ ವಿನಂತಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

      ಮುಂದಿನ ದಿನಗಳಲ್ಲಿ ಮೆ:WCL ನಿಂದ ಒಪ್ಪಂದದ ಪ್ರಕಾರ ಪೂರ್ಣ ಪ್ರಮಾಣದ ಕಲ್ಲಿದ್ದಲು ಪೂರೈಕೆ ಮಾಡುವುದರೊಂದಿಗೆ ರಾಜ್ಯದಲ್ಲಿ ನಿರಂತರವಾಗಿ ನಿಗದಿತ ಪ್ರಮಾಣದ ವಿದ್ಯುತ್ ಉತ್ಪಾದನೆಗೆ ಸಹಕರಿಸುವಂತೆ ಕೋರಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

 

Recent Articles

spot_img

Related Stories

Share via
Copy link
Powered by Social Snap