ಬೆಂಗಳೂರು :
ನಿರ್ದೇಶಕ ಪ್ರೇಮ್ ಹಾಗೂ ನಟ ಕಿಚ್ಚ ಸುದೀಪ್ ವಿರುದ್ಧ ‘ದಿ-ವಿಲನ್’ ಚಿತ್ರದಲ್ಲಿನ ದೃಶ್ಯ ವಿರೋಧಿಸಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಾಗಿದೆ.
ದಿ- ವಿಲನ್ ಚಿತ್ರದಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಸಂಘಟನೆ ಒಕ್ಕೂಟದ ಅಧ್ಯಕ್ಷ ನಾಗೇಶ್ ಎಂಬವರು ಪ್ರೇಮ್ ಹಾಗೂ ಸುದೀಪ್ ವಿರುದ್ಧ ಫಿಲ್ಮ್ ಚೇಂಬರ್ ನಲ್ಲಿ ದೂರು ನೀಡಿದ್ದಾರೆ.
ದಿ-ವಿಲನ್ ಸಿನಿಮಾದಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ಕಿಚ್ಚ ಸುದೀಪ್ ತಮ್ಮ ಸೊಂಟಕ್ಕೆ ಕನ್ನಡದ ಬಾವುಟ ಸುತ್ತಿಕೊಳ್ಳುತ್ತಾರೆ. ಈ ಕಾರಣಕ್ಕಾಗಿ ಅವರ ವಿರುದ್ಧ ದೂರು ದಾಖಲಾಗಿದೆ. ಸದ್ಯ ಪ್ರೇಮ್ ಹಾಗು ಸುದೀಪ್ ಕ್ಷಮೆ ಕೇಳಬೇಕು, ಕ್ಷಮೆ ಕೇಳದಿದ್ದರೆ ಮುಂದಿನ ದಿನಗಳಲ್ಲಿ ಸಿನಿಮಾ ರಿಲೀಸ್ ಮಾಡಲು ಬಿಡುವುದಿಲ್ಲ ಎಂದು ಸಂಘಟನೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
