ಬಾಗಲಕೋಟೆ :
ಕೊರೊನಾ ಲಾಕ್ ಡೌನ್ ಹಿನ್ನೆಲೆ ರಸ್ತೆ ಮಾರ್ಗವಾಗಿ ಹೋಗದೇ ನದಿಯಲ್ಲಿ ಈಜಿ ದಡ ಸೇರಲು ಯತ್ನಿಸಿದ ಕೆ.ಎಸ್.ಆರ್.ಟಿ.ಸಿ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಹುನಗುಂದದ ನಿವಾಸಿ ಮಲ್ಲಪ್ಪ ಬೊಮ್ಮಣಗಿ (45) ಮೃತ ಕೆ.ಎಸ್.ಆರ್.ಟಿ.ಸಿ ಕಂಡಕ್ಟರ್, ಈ ಘಟನೆ ಸೋಮವಾರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೃತ ಮಲ್ಲಪ್ಪ ತನ್ನ ಪತ್ನಿ ಹಾಗೂ ಮಗುವನ್ನು ನೋಡಲು ಗ್ರಾಮಕ್ಕೆ ತೆರಳಿದ್ದನು. ಬಳಿಕ ಇಬ್ಬರನ್ನು ನೋಡಿಕೊಂಡು ವಾಪಸ್ ಬರುತ್ತಿದ್ದನು. ಈ ವೇಳೆ ಚೆಕ್ ಪೋಸ್ಟ್ ಬಳಿ ಹೋದರೆ ಪೊಲೀಸರು ಹೋಗಲು ಬಿಡುವುದಿಲ್ಲ ಎಂದು ತಂಗಡಗಿ ಬಳಿಯ ನದಿಯಲ್ಲಿ ಈಜಿ ದಡ ಸೇರಲು ಯತ್ನಿಸಿದ್ದಾನೆ, ಆದರೆ ಈಜಲಾಗದೇ ಮಲ್ಲಪ್ಪ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಬಂದು ಪರಿಶೀಲನೆ ನಡೆಸಿ, ಮೃತದೇಹವನ್ನು ನದಿಯಿಂದ ಮೇಲಕ್ಕೆತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ