‘ಕಾಂಗ್ರೆಸ್, ಜೆಡಿಎಸ್‍ಗೆ ಭವಿಷ್ಯದಲ್ಲಿ ಅಸ್ತಿತ್ವ ಇರಲ್ಲ’- ಶ್ರೀರಾಮುಲು

ದಾವಣಗೆರೆ : 

      ಭವಿಷ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‍ಗೆ ಅಸ್ತಿತ್ವ ಇರಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.

      ನಗರದ ನಿಟ್ಟುವಳ್ಳಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ, ನಾನು ಸರ್ಕಾರ ಬೀಳಿಸೋದಿಲ್ಲ ಎಂದು ಹೇಳುತ್ತಾರೆ, ಮತ್ತೊಂದೆಡೆ ಅನರ್ಹರು ಸೋಲಬೇಕೆಂದು ಹೇಳುತ್ತಾರೆ. ಈ ಮೂಲಕ ದ್ವಂದ್ವ ಚುನಾವಣಾ ರಾಜಕಾರಣ ಪ್ರಾರಂಭ ಮಾಡಿದ್ದಾರೆ. ಭವಿಷ್ಯದಲ್ಲಿ ಕಾಂಗ್ರೆಸ್, ಜೆಡಿಎಸ್‌ಗೆ ಅಸ್ತಿತ್ವವೇ ಇರುವುದಿಲ್ಲ. ಬಿಜೆಪಿಗೆ ಭವಿಷ್ಯ ಇದೆ, ಜನರ ಆಶೀರ್ವಾದ ಇದೆ ಎಂದರು.

      ನಗರದ ನಿಟ್ಟುವಳ್ಳಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಶಿವಸೇನೆಯು ಎನ್ ಸಿಪಿ ಹಾಗೂ ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚನೆ ಮಾಡಿದೆ. ಆದ್ರೆ ಇಲ್ಲಿ ಅದು ಆಗುವುದಿಲ್ಲ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವುದಿಲ್ಲ. ಈಗ ಬಿಜೆಪಿ ದೇಶದಲ್ಲಿ ಹೆಮ್ಮರವಾಗಿ ಬೆಳೆಯುತ್ತದೆ. ನಮ್ಮ ಸರ್ಕಾರ 105 ಸೀಟ್ ಗೆದ್ದರೂ ಅಧಿಕಾರಕ್ಕೆ ಬರಲು ಆಗಲಿಲ್ಲ. ಶಾಸಕರು ರಾಜೀನಾಮೆ ಕೊಟ್ಟ ಕಾರಣ ಇಂದು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಾಗಾಗಿ ಶಾಸಕರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ