ತುಮಕೂರು :
ಮಾಜಿ ಶಾಸಕ ಕೆ.ಎನ್.ರಾಜಣ್ಣರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸುವಂತೆ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಗೆ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಒತ್ತಾಯಿಸಿದೆ.
ತುಮಕೂರಿನಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಹೆಚ್.ಡಿ.ದೇವೇಗೌಡರು ಸೋಲಲು ಕೆ.ಎನ್.ರಾಜಣ್ಣ ನವರ ಪಕ್ಷ ವಿರೋಧಿ ಚಟುವಟಿಕೆಯೇ ಕಾರಣರೆಂದು ಆರೋಪಿಸಿರುವ ಜಿಲ್ಲಾ ಕಾಂಗ್ರೆಸ್, ಪಕ್ಷ ವಿರೋಧಿ ಚಟುವಟಿಗೆ ಮಾಡಿದ್ದಲ್ಲದೇ ರಾಜಣ್ಣ ಪಕ್ಷದ ಕಚೇರಿಗೆ ಬಂದು ತಮ್ಮ ವಿರುದ್ಧ ಮಾತಾಡದಂತೆ ನಮಗೆಲ್ಲ ಬೆದರಿಕೆ ಹಾಕಿದ್ದಾರೆ. ಆದ್ದರಿಂದ ಕೆ.ಎನ್.ರಾಜಣ್ಣ ವಿರುದ್ಧ ಕ್ರಮ ತೆಗೆದುಕೊಳ್ಳಲೇ ಬೇಕೆಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಮಕೃಷ್ಣ ತಿಳಿಸಿದ್ದಾರೆ.
ಕಾಂಗ್ರೆಸ್ ನಲ್ಲಿದ್ದುಕೊಂಡು ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಎಲ್ಲರ ವಿರುದ್ಧ ಪಕ್ಷ ಶಿಸ್ತುಕ್ರಮ ಕೈಗೊಳ್ಳಬೇಕು. ಪಕ್ಷ ಕ್ಲೀನ್ ಆದ್ರೆ ಮತ್ತೆ ಗ್ರೆಸ್ ಕಟ್ಟಬಹುದು. ಆದ್ದರಿಂದ ರಾಜಣ್ಣ ಅವರನ್ನ ಪಕ್ಷದಿಂದ ಉಚ್ಛಾಟಿಸಲು ಆಗ್ರಹಿಸ್ತೇವೆ ಎಂದು ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ