ಬೆಂಗಳೂರು :
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಪಕ್ಷದ ಹೈಕಮಾಂಡ್ ನಿಂದ ದಿಡೀರ್ ಬುಲಾವ್ ಬಂದಿದ್ದು, ಇಂದು ಸಂಜೆ ಡಿಕೆಶಿ ದೆಹಲಿಗೆ ದೌಡಾಯಿಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿರುವ ಡಿ.ಕೆ.ಶಿವಕುಮಾರ್ ಸದ್ಯಕ್ಕೆ ಆ ಸ್ಥಾನಮಾನ ಬೇಡ ಎಂದು ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದರು. ಆದರೆ, ಹೈಕಮಾಂಡ್ ನಿಂದಲೇ ಡಿಕೆಶಿಗೆ ಬುಲಾವ್ ಬಂದಿದ್ದು, ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮುನ್ಸೂಚನೆ ಎನ್ನಲಾಗಿದೆ. ಹೀಗಾಗಿ ಡಿಕೆಶಿ ಇಂದು ಸಂಜೆ ದೆಹಲಿಯ ವಿಮಾನ ಹತ್ತಲಿದ್ದಾರೆ ಎನ್ನಲಾಗಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ ಬಳಿಕ ಸಾಕಷ್ಟು ಹಿರಿಯ ನಾಯಕರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ. ಆದರೆ, ಹೈಕಮಾಂಡ್ ದಿಡೀರ್ ನೇ ಡಿಕೆಶಿ ಅವರಿಗೆ ಬುಲಾವ್ ನೀಡಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ