ಬೆಂಗಳೂರು :
ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ಕುರಿತಂತೆ ಕಾಂಗ್ರೆಸ್ ಹೈಕಮಾಂಡ್ ಚರ್ಚೆ ನಡೆಸಲು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬುಲಾವ್ ನೀಡಿದೆ.
ಹೈಕಮಾಂಡ್ ನಾಳೆ (ಸೋಮವಾರ) ದೆಹಲಿಗೆ ಬರುವಂತೆ ಸಿದ್ದರಾಮಯ್ಯಗೆ ಸೂಚನೆ ನೀಡಿದ್ದು, ಹಿರಿಯ ನಾಯಕರೊಂದಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರ ಆಯ್ಕೆ ಕುರಿತಂತೆ ಚರ್ಚೆ ನಡೆಸಲಿದ್ದಾರೆ.
ಚರ್ಚೆಯ ಬಳಿಕ ಕೆಪಿಸಿಸಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನದ ನೇಮಕದ ಕುರಿತು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹೈಕಮಾಂಡ್ ಬುಲಾವ್ ಮೇರೆಗೆ ಸೋಮವಾರ ಸಂಜೆ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ ಹಾಗೂ ಕೆ.ಹೆಚ್.ಮುನಿಯಪ್ಪ ಅವರ ನಡುವೆ ಪೈಪೋಟಿ ಇದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ