ಬೆಂಗಳೂರು:
ಬುಧವಾರಕ್ಕೆ ನಿಗದಿಯಾಗಿದ್ದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ಸರಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯನ್ನು ಮುಂದೂಡಲಾಗಿದೆ.
ನಟ, ಸಾಹಿತಿ ಗಿರೀಶ್ ಕಾರ್ನಾಡ್ ನಿಧನ ಪ್ರಯುಕ್ತ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ, ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಈ ಮೊದಲು ಹೆಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ರಾಜಭವನದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಜೂನ್ 12 ರಂದು ಬೆಳಿಗ್ಗೆ 11.30 ಕ್ಕೆ ಸಚಿವಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಪಡಿಸಿದ್ದರು.
ಆದರೆ, ಶೋಕಾಚರಣೆ ಸಂದರ್ಭದಲ್ಲಿ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ಆಯೋಜಿಸದ ಹಿನ್ನೆಲೆಯಲ್ಲಿ ಜೂನ್ 12ರಂದು ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಯನ್ನು ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ