ಬೆಂಗಳೂರು:
ಲೋಕಸಭಾ ಚುನಾವಣೆ ಹಿನ್ನೆಲೆ ನಗರದ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷದ ನಾಯಕರ ಸಭೆ ಆರಂಭವಾಗಿದೆ.
ಚುನಾವಣೆ ರಣತಂತ್ರ, ಮೈತ್ರಿ ಅಭ್ಯರ್ಥಿಗಳ ಆಯ್ಕೆ, ಚುನಾವಣಾ ಉಸ್ತುವಾರಿಗಳ ನೇಮಕ ಸೇರಿದಂತೆ ಹಲವು ವಿಚಾರಗಳ ಚರ್ಚೆಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ನಗರದ ಅಶೋಕ ಹೋಟೆಲ್‌ನಲ್ಲಿ ಸಭೆ ಸೇರಿದ್ದಾರೆ.
ಇಂದು ನಡೆಯುತ್ತಿರುವ ರೌಂಡ್ ಟೇಬಲ್ ಮೀಟಿಂಗ್ ನಲ್ಲಿ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ವರಿಷ್ಠರು ಲೋಕಸಭಾ ಚುನಾವಣೆ ರಣತಂತ್ರ, ಮೈತ್ರಿ ಅಭ್ಯರ್ಥಿಗಳ ಆಯ್ಕೆ, ಚುನಾವಣಾ ಉಸ್ತುವಾರಿಗಳ ನೇಮಕ ಸೇರಿದಂತೆ ಹಲ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಅಲ್ಲದೇ ಸ್ಥಳೀಯ ಮಟ್ಟದಲ್ಲಿ ಉಧ್ಬವಿಸಿರುವ ಸಮಸ್ಯೆ ಬಗೆಹರಿಸುವ ಕುರಿತೂ ಚರ್ಚೆ ಮಾಡಲಾಗುತ್ತಿದೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ‌್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ, ಕುಪೇಂದ್ರ ರೆಡ್ಡಿ ಭಾಗವಹಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
