ಕಾಂಗ್ರೆಸ್-ಜೆಡಿಎಸ್ ಅತೃಪ್ತ ಶಾಸಕರಿಗೂ ಸಚಿವ ಸ್ಥಾನ!!?

ಹುಬ್ಬಳ್ಳಿ :

      ಕಾಂಗ್ರೆಸ್-ಜೆಡಿಎಸ್ ನಿಂದ ಬಂದಿರುವ ಅತೃಪ್ತ ಶಾಸಕರಿಗೂ ಸಚಿವ ಸ್ಥಾನ ನೀಡುತ್ತೇವೆ ಎಂದು ನೂತನ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

      ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್-ಜೆಡಿಎಸ್ ಶಾಸಕರು ಬೆಂಬಲಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಪಕ್ಷದಿಂದ ಬಂದಿರುವ ಅತೃಪ್ತ ಶಾಸಕರಿಗೂ ಸಚಿವ ಸ್ಥಾನ ನೀಡಲಾಗುತ್ತದೆ. ಇದನ್ನೆಲ್ಲ ನೋಡಿಕೊಂಡೇ ಸಚಿವ ಸ್ಥಾನ ಹಂಚಿಕೆ ಮಾಡಲಾಗಿದೆ ಎಂದರು.

      ಇನ್ನು ಸಚಿವ ಸ್ಥಾನ ವಂಚಿತರಿಗೆ ಪಕ್ಷದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು, ಅಸಮಾಧಾನ ಸಹಜ. ಶಾಸಕರ ಅಸಮಾಧಾನವನ್ನು ಬಗೆಹರಿಸುತ್ತೇವೆ ಎಂದರು.

     ಕೇಂದ್ರ ಸರ್ಕಾರ ನೀಡಿರುವ 1029 ಕೋಟಿ ರೂ. ಪರಿಹಾರ ಸಾಲುವುದಿಲ್ಲ. ಹೆಚ್ಚಿನ ಪರಿಹಾರ ತರುವ ಕೆಲಸ ಮಾಡುತ್ತೇವೆ. ಇಂದು ನಾಳೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಸಂತ್ರಸ್ತರ ನೋವು ಆಲಿಸುತ್ತೇವೆ. ಉತ್ತರ ಕರ್ನಾಟಕದ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟ ಜಿಲ್ಲೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಶಾಶ್ವತ ಪರಿಹಾರ ಕಲ್ಪಿಸುವ ಚಿಂತನೆ ಇದೆ ಎಂದು ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ