ಬೆಂಗಳೂರು:
ಜೆಡಿಎಸ್, ಕಾಂಗ್ರೆಸ್ ಮುಖಂಡರ ನಿವಾಸ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವುದನ್ನು ಖಂಡಿಸಿ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಬುಧವಾರ ಅಹೋರಾತ್ರಿ ಧರಣಿಗೆ ಮುಂದಾಗಿದೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ಬೆಳಗ್ಗೆ ಮಂಡ್ಯ, ಹಾಸನ, ಮೈಸೂರು, ಬೆಂಗಳೂರು ಸೇರಿದಂತೆ ವಿವಿಧೆಡೆ ಕಾಂಗ್ರೆಸ್, ಜೆಡಿಎಸ್ ಮುಖಂಡರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಪ್ರತ್ಯೇಕವಾಗಿ ಧರಣಿ ನಡೆಸುತ್ತಿದ್ದು, ಈಗಾಗಲೇ ಕಛೇರಿ ಮುಂದೆ ಜಮಾಯಿಸಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ತೊಲಗಲಿ, ತೊಲಗಲಿ ಬಿಜೆಪಿ ತೊಲಗಲಿ ಎಂದು ಘೋಷಣೆ ಕೂಗುತ್ತಿದ್ದಾರೆ.
ಪ್ರತಿಭಟನೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ. ಡಿಸಿಎಂ ಪರಮೇಶ್ವರ್ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಧ್ಯಮದ ವರದಿಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ