ತುಮಕೂರು ಲೋಕಸಭೆ : ಜೆಡಿಎಸ್ ಪಾಲಾದರೆ, ಪಕ್ಷೇತರ ಸ್ಪರ್ಧೆ – ಕೆಎನ್ಆರ್

0
53

ತುಮಕೂರು: 

      ತುಮಕೂರಿನಲ್ಲಿ ಜೆಡಿಎಸ್ ಗೆ ಟಿಕೆಟ್ ಕೊಟ್ಟರೆ, ನಾನು ಪಕ್ಷೇತರವಾಗಿಯಾದರೂ ಸ್ಪರ್ಧೆ ಮಾಡುತ್ತೇನೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಸವಾಲು ಹಾಕಿದ್ದಾರೆ.

      ತುಮಕೂರಿನಲ್ಲಿ ಜೆಡಿಎಸ್ ಗೆ ಟಿಕೆಟ್ ಕೊಟ್ಟರೆ, ನಾನು ಪಕ್ಷೇತರವಾಗಿಯಾದರೂ ಸ್ಪರ್ಧೆ ಮಾಡುತ್ತೇನೆ. ಕಾಂಗ್ರೆಸ್ ಉಳುವಿಗಾಗಿ ನನ್ನ ಸ್ಪರ್ಧೆಯೇ ಹೊರತು ಜೆಡಿಎಸ್ ವಿರುದ್ಧ ಅಲ್ಲ. ಜೆಡಿಎಸ್ ಅವರನ್ನ ಹೀಗೆ ಬಿಟ್ಟರೆ ರಾಜ್ಯದಲ್ಲಿ ಕಾಂಗ್ರೆಸ್ ಪೂರ್ಣ ನಿರ್ನಾಮ ಅಗಲಿದೆ. ಹಾಗಾಗಿ ಕಾಂಗ್ರೆಸ್ ಉಳಿಸಲು ಏನು ಮಾಡಬೇಕು ಅದನ್ನು ಮಾಡಲು ಸಿದ್ಧನಿದ್ದೇನೆ ಎಂದು ಜೆಡಿಎಸ್ ವಿರುದ್ಧ ಗುಡುಗಿದರು.

      ಜೆಡಿಎಸ್ ಪಕ್ಷಕ್ಕೆ ಎಷ್ಟೇ ಸೀಟ್ ಗಳನ್ನು ಬಿಟ್ಟುಕೊಟ್ಟರು ಅವರು ಮೂರು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುತ್ತಾರೆ. ಒಂದು ವೇಳೆ ಮೂರಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಗೆದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದೂ ಕೂಡ ತಿಳಿಸಿದ್ದಾರೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

LEAVE A REPLY

Please enter your comment!
Please enter your name here