ತುಮಕೂರು:
ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ನ ಮೂವರು ಹಿರಿಯ ನಾಯಕರು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಅವರು ಅಚ್ಚರಿ ಮೂಡಿಸಿದ್ದಾರೆ.
ಅವರು ಇಂದು ತುಮಕೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡುವ ವೇಳೆ ಅವರು ,ಸಿಎಂ ಹೆಚ್.ಡಿಕೆ ಅವರನ್ನು ಹೇಗಾದ್ರು ಮಾಡಿ ಕೆಳಗೆ ಇಳಿಸುವುದಕ್ಕೆ ಕಾಂಗ್ರೆಸ್ ನ ಮೂವರು ಪ್ರಯತ್ನ ಮಾಡುತ್ತಿದ್ದು, ಇದಕ್ಕೆ ಹಿರಿಯ ನಾಯಕರು, ಶಾಸಕರು ಕೂಡ ಕೈ ಜೋಡಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಆ ಮೂವರು ಯಾರು ಅಂತ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇವರು ಯಾರು ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ಆಪರೇಷನ್ ಕಮಲ ಎಂಬ ಬೆದರುಬೊಂಬೆ ಇಟ್ಟುಕೊಂಡು ಹುನ್ನಾರ ನಡೆಸುತ್ತಿದ್ದಾರೆ. ಆ ಮೂಲಕ ಅವರು ಜೆಡಿಎಸ್ ಮುಖಂಡರನ್ನು ಹೆದರಿಸುತ್ತಿದ್ದಾರೆ. ಮೂವರು ನಾಯಕರಲ್ಲಿ ಒಬ್ಬರು ಸಚಿವರು ಮತ್ತು ಇನ್ನಿಬ್ಬರು ಸಚಿವ ಸ್ಥಾನದ ಆಕಾಂಕ್ಷಿಗಳು ಎಂದು ವಿಜಯೇಂದ್ರ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
