ಶಾಸಕ ಆನಂದ್ ಸಿಂಗ್ ಆಸ್ಪತ್ರೆಗೆ ದಾಖಲು!!

ಬೆಂಗಳೂರು: 

      ಆಪರೇಶನ್ ಕಮಲ ಭೀತಿಯಿಂದ ಕಾಂಗ್ರೆಸ್ ನ ಎಲ್ಲಾ ಶಾಸಕರನ್ನು ಎರಡು ದಿನಗಳ ಹಿಂದೆ ಈಗಲ್ಟನ್ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದ ಕಾಂಗ್ರೆಸ್  ಶಾಸಕರಾದ ಆನಂದ್ ಸಿಂಗ್ ಮತ್ತು ಕಂಪ್ಲಿ ಗಣೇಶ್ ಮಧ್ಯೆ ತೀವ್ರ ಮಾರಾಮಾರಿ ನಡೆದು ಆನಂದ್ ಸಿಂಗ್ ಅವರ ತಲೆಗೆ ತೀವ್ರ ಪೆಟ್ಟಾಗಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ರೆಸಾರ್ಟ್ ನಲ್ಲಿ ಶಾಸಕರ ಕಿತ್ತಾಟ, ಬಾಟಲ್ ನಿಂದ ಹಲ್ಲೆ!!?

       ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆಯಾಗಿ ತೀವ್ರ ಗಾಯಗೊಂಡಿದ್ದರಿಂದ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಆಸ್ಪತ್ರೆಯ 6ನೇ ಮಹಡಿಯಲ್ಲಿರುವ ವಿಶೇಷ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಸಿಕ್ಕಿದೆ.  

     ಇನ್ನು ಹಲ್ಲೆಗೊಳಗಾಗಿರುವ ಶಾಸಕ ಆನಂದ್ ಸಿಂಗ್ ಅವರು ಯಾರನ್ನು ಭೇಟಿ ಮಾಡಲ್ಲ ಎಂದು ಹೇಳಿದ್ದು, ಸದ್ಯ ಅವರೊಂದಿಗೆ ಕೆಲ ಸ್ನೇಹಿತರು ಮಾತ್ರ ಅವರೊಂದಿಗೆ ಇದ್ದಾರೆ. ಆದರೆ ಸಚಿವ ಡಿಕೆಶಿ ಅವರ ಸಹೋದರ ಸಂಸದ ಡಿಕೆ ಸುರೇಶ್ ಸೇರಿದಂತೆ ಹಲವು ಬೆಂಬಲಿಗರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ