ಬೆಂಗಳೂರು :
ಆನಂದ್ ಸಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲೇ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ಕೂಡ ರಾಜೀನಾಮೆ ನೀಡುವ ಮೂಲಕ ಮೈತ್ರಿ ಸರ್ಕಾರಕ್ಕೆ ಶಾಕ್ ನೀಡಿದ್ದಾರೆ.
ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ನೇರವಾಗಿ ಭೇಟಿಯಾಗದೆ ಕಚೇರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ ಎಂದು ಹೇಳಲಾಗಿದೆ. ಕೈ ಬರಹದಲ್ಲಿ ರಾಜೀನಾಮೆ ಪತ್ರ ಬರೆದು ರಮೇಶ್ ಜಾರಕಿಹೊಳಿ ಫ್ಯಾಕ್ಸ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಪಕ್ಷತೊರೆಯುವ ಕುರಿತು ಈ ಹಿಂದೆ ಮಾತನಾಡಿದ್ದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತ. ನಾನೊಬ್ಬನೆ ಪಕ್ಷವನ್ನು ತೊರೆಯುವುದಿಲ್ಲ. ಒಬ್ಬನ ರಾಜೀನಾಮೆಯಿಂದ ಏನು ಸಾಧ್ಯವಿಲ್ಲ. ನಾನು ಒಬ್ಬನೇ ಪಕ್ಷ ಬಿಡುವುದಿಲ್ಲ. ನನ್ನ ಬೆಂಬಲಿಗರೊಂದಿಗೆ ಪಕ್ಷ ತೊರೆಯುತ್ತೇನೆ ಎಂದಿದ್ದರು.
ಮಂತ್ರಿಗಿರಿಸ್ಥಾನ ಕೈ ತಪ್ಪಿದಾಗಿನಿಂದಲೂ ಪಕ್ಷ ತೊರೆಯುವ ಮಾತನಾಡುತ್ತಿದ್ದ ಗೋಕಾಕ್ ಶಾಸಕ ಕೊನೆಗೂ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.
ರಾಜೀನಾಮೆ ನಿಯಮ ಪಾಲಿಸದ ಶಾಸಕ :
ರಾಜೀನಾಮೆ ಸಲ್ಲಿಸಬೇಕಾದರೆ ಸ್ಪೀಕರ್ ಭೇಟಿಯಾಗಿ ಖುದ್ದಾಗಿ ರಾಜೀನಾಮೆ ಸಲ್ಲಿಸಬೇಕು. ಆದರೆ ರಮೇಶ್ ಜಾರಕಿಹೊಳಿ ಸಲ್ಲಿಸಿರುವ ರಾಜೀನಾಮೆ ಅಂಗೀಕರವಾಗುತ್ತದಾ ಇಲ್ಲವೋ ಎನ್ನುವುದು ಇನ್ನೂ ಖಾತರಿಯಾಗಿಲ್ಲ. ಆದರೆ, ಸಮ್ಮಿಶ್ರ ಸರಕಾರಕ್ಕೆ ಸಂಕಷ್ಟ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ