ಬೆಂಗಳೂರು:
ರಾಜ್ಯ ಸರ್ಕಾರವನ್ನು ಪತನಗೊಳಿಸಲು ರಾಜ್ಯನಾಯಕರು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಇವರಿಗೆ ಬಿಜೆಪಿ ರಾಷ್ಟ್ರೀಯ ನಾಯಕರು ಮತ್ತು ಮಹಾರಾಷ್ಟ್ರ ಸರ್ಕಾರ ನೆರವು ನೀಡುತ್ತಿದೆ ಎಂದು ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಬಿಜೆಪಿ ವಿರುದ್ಧ ದೂರಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮುಂಬೈನಲ್ಲಿ ನಮ್ಮ ಕೆಲವು ಶಾಸಕರನ್ನು ಕೂಡಿಹಾಕಲಾಗಿದೆ. ನೀವು ನಮ್ಮ ಮಾತು ಕೇಳಿಲ್ಲ ಅಂದರೆ ನಿಮ್ಮ ರಾಜಕೀಯ ಜೀವನ ಮುಗಿಸುತ್ತೇವೆ ಎಂದು ಬಿಜೆಪಿಯಿಂದ ಬೆದರಿಕೆ ಹಾಕಲಾಗುತ್ತಿದೆ. ಈ ಕುರಿತು ದಾಖಲೆಗಳು ನಮ್ಮ ಬಳಿ ಇವೆ ಎಂದು ವಾಗ್ದಾಳಿ ನಡೆಸಿದ್ದಾರೆ.
“ದೇಶದಲ್ಲಿ ಸಿಬಿಐ, ಇಡಿ ಮುಂತಾದ ಎಲ್ಲಾ ಸಂಸ್ಥೆಗಳನ್ನೂ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಆಪರೇಶನ್ ಕಮಲ ಎಂಬ ಪರಿಕಲ್ಪನೆಯನ್ನು ತಂದು ದೇಶದ ರಾಜಕೀಯ ಇತಿಹಾಸಕ್ಕೇ ಕಪ್ಪುಚುಕ್ಕೆಯನ್ನು ಇಟ್ಟ ಕೀರ್ತಿ ರಾಜ್ಯದ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ. ಅದರಲ್ಲೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಆಪರೇಶನ್ ಕಮಲದ ರೂವಾರಿ” ಆರೋಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ