ಕಲಬುರ್ಗಿ :
ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಕಾಂಗ್ರೆಸ್ , ರಾಜ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ಇಂದು ಕಲಬುರ್ಗಿಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ.
ಬೆಳಗ್ಗೆ 11ಗಂಟೆಗೆ ಕಲಬುರ್ಗಿಯ ಎನ್‌ವಿ ಆಟದ ಮೈದಾನದಲ್ಲಿ ನಡೆವ ಸಮಾವೇಶದಲ್ಲಿ ಅವರು ಭಾಗವಹಿಸಲಿದ್ದು, ಏಪ್ರಿಲ್ 23 ರಂದು ನಡೆಯಲಿರುವ ಮೂರನೇ ಹಂತದ ಲೋಕಸಭಾ ಚುನಾವಣೆಗೆ ಪ್ರಚಾರ ಕೈಗೊಳ್ಳಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಕಲಬುರಗಿಯಲ್ಲಿ ಚುನಾವಣಾ ರಣ ಕಹಳೆ ಊದಲಿದ್ದಾರೆ.
ಕಾಂಗ್ರೆಸ್ ಶಾಸಕರಾಗಿದ್ದ ಉಮೇಶ್ ಜಾಧವ್ ಪಕ್ಷಕ್ಕೆ ರಾಜೀನಾಮೆ ನೀಡಿ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧವೇ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಸೋಮವಾರ ನಡೆಯಲಿರುವ ಕಲಬುರಗಿ ಸಮಾವೇಶ ಮಹತ್ವ ಪಡೆದುಕೊಂಡಿದೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಸಂಸದೀಯ ನಾಯಕ, ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ಪರ ಪ್ರಚಾರ ನಡೆಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
