ನವದೆಹಲಿ:
ನಾನು ಕಾಂಗ್ರೆಸ್‌ನ ಅಧ್ಯಕ್ಷ ಹುದ್ದೆ ತೊರೆದಿದ್ದೇನೆ. ತಡ ಮಾಡದೆ, ಶೀಘ್ರದಲ್ಲಿ ಕಾಂಗ್ರೆಸ್ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ.
ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ನಾನು ತಲೆ ಹಾಕುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿರುವ ರಾಹುಲ್ ಹೊಸ ನಾಯಕನನ್ನು ತಡ ಮಾಡದೇ ನೇಮಕ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ಮೇ 25ರಂದು ರಾಜೀನಾಮೆ ನೀಡಿದ್ದಾರೆ. ಆದರೆ, ಅದನ್ನು ಪಕ್ಷದ ಕಾರ್ಯಕಾರಿ ಸಮಿತಿ ಇನ್ನೂ ಅಂಗೀಕರಿಸಿಲ್ಲ. ಈ ನಡುವೆ ಕಾಂಗ್ರೆಸ್ ಮುಖ್ಯಮಂತ್ರಿಗಳೆಲ್ಲರೂ ರಾಹುಲ್ ಗಾಂಧಿ ಮೇಲೆ ಒತ್ತಡ ಹೇರುತ್ತಿದ್ದು, ಪಕ್ಷದ ಅಧ್ಯಕ್ಷ ಸ್ಥಾನವನ್ನು ತೊರೆಯದಂತೆ ಮನವಿ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಶೀಘ್ರದಲ್ಲಿ ಸಭೆ ಕರೆದು ಪಕ್ಷದ ಅಧ್ಯಕ್ಷ ಯಾರು ಎಂಬುದನ್ನು ನಿರ್ಧರಿಸಬೇಕು ಎಂದು ರಾಹುಲ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
