ಧಾರವಾಡ :
ಧಾರವಾಡದ ವಿದ್ಯಾನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತದ ಕಾರ್ಯಾಚರಣೆ ಮುಂದುವರೆದಿದ್ದು, ಇದೀಗ ಸಾವಿನ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ.
ಮಂಗಳವಾರ ರಾತ್ರಿ ಸುಮಾರು 1.30ಕ್ಕೆ ಎನ್‍ಡಿಆರ್‍ಎಫ್(National Disaster Response Force) ತಂಡ ಸ್ಥಳಕ್ಕೆ ಆಗಮಿಸಿದ್ದು, ಸುಮಾರು 30 ಜನರ ತಂಡದಿಂದ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಎನ್‍ಡಿಆರ್‍ಎಫ್‍ಗೆ ಶ್ವಾನದಳ ಸಾಥ್ ನೀಡಿದೆ.
ಕುಸಿದ ಕಟ್ಟಡದಲ್ಲಿ ಒಂದು ಕಂಪ್ಯೂಟರ್ ಸೆಂಟರ್ ಇರುವ ಸಾಧ್ಯತೆ ಇದ್ದು, ಕಂಪ್ಯೂಟರ್ ಸೆಂಟರ್‍ನಲ್ಲಿ ಸುಮಾರು 15 ವಿದ್ಯಾರ್ಥಿಗಳು ಇರುಬಹುದು ಎಂದು ಹೇಳಲಾಗುತ್ತಿದೆ. ಹೀಗಾಗಿ ಸಾವಿನ ಸಂಖ್ಯೆ 30 ದಾಟುವ ಸಾಧ್ಯತೆ ಇದೆ. ಇನ್ನೂ ಕಟ್ಟಡದ ಅವಶೇಷಗಳ ಅಡಿ 30ಕ್ಕೂ ಹೆಚ್ಚು ಜನರು ಸಿಲುಕಿಕೊಂಡಿದ್ದು, ಅವಷೇಶದಡಿ ಸಿಲುಕಿದವರಿಗೆ ನಿರಂತರವಾಗಿ ಪೈಪ್ ಮುಖಾಂತರ ನೀರು ಮತ್ತು ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ.
ಇದುವರೆಗೂ ರಕ್ಷಣಾ ಕಾರ್ಯದಲ್ಲಿ 55 ಜನರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ ಎರಡು ದಿನಗಳ ಕಾಲ ಕಾರ್ಯಾಚರಣೆ ನಡೆಯುವ ಸಾಧ್ಯತೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ