ಕಲಬುರ್ಗಿ

ರಾಜ್ಯದಲ್ಲಿ ಕೊರೊನಾ ವೈರಸ್ ಗೆ ಮತ್ತೊಂದು ಬಲಿಯಾಗಿದ್ದು, ಸೋಂಕಿಗೆ ತುತ್ತಾಗಿ ಬಲಿಯಾದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.
ಹೌದು, ಕಲಬುರಗಿಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 56 ವರ್ಷದ ವ್ಯಕ್ತಿ ಕಿಲ್ಲರ್ ಕೊರೊನಾದಿಂದ ಮೃತಪಟ್ಟಿದ್ದಾರೆ. ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಈ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಅವರಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿತ್ತು. ಆದರೆ, ಫಲಿಸದೇ ಇಂದು ಮೃತಪಟ್ಟಿದ್ದಾರೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಈವರೆಗೆ ಡೆಡ್ಲಿ ಕೊರೊನಾಗೆ ಕಲಬುರಗಿಯಲ್ಲಿ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








