ಬೆಂಗಳೂರು :
ಹೋಮ್ ಕ್ವಾರಂಟೈನ್ನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ರಾಜಾಜಿನಗರ ಪೊಲೀಸ್ ಠಾಣೆಯನ್ನ ಸೀಲ್ಡೌನ್ ಮಾಡಲಾಗಿದೆ.
ಪಶ್ಚಿಮ ವಿಭಾಗದ ಚಿಕ್ಕಪೇಟೆ ಎಸಿಪಿ ಕಳೆದ ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಎಸಿಪಿ ಕೊರೊನಾ ಟೆಸ್ಟ್ ಮಾಡಿಸಿ ರಜೆಯಲ್ಲಿದ್ದರು. ಆದರೆ ಪಾಸಿಟಿವ್ ರಿಪೋರ್ಟ್ ಬಂದಿದ್ದು, ಪರಿಣಾಮ 10ಕ್ಕೂ ಹೆಚ್ಚು ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ಸದ್ಯ ರಾಜಾಜಿನಗರ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಆ ಠಾಣೆ ಕೂಡ ಸೀಲ್ ಡೌನ್ ಆಗಿದೆ. 3 ದಿನಗಳ ಕಾಲ ಪೊಲೀಸ್ ಠಾಣೆಯನ್ನು ಮುಚ್ಚಲಾಗಿದ್ದು ಇಡೀ ಠಾಣೆಗೆ ಬಿಬಿಎಂಪಿ ಸಿಬ್ಬಂದಿ ರಾಸಾಯನಿಕ ಸಿಂಪಡನೆ ಮಾಡಿದರು.
ನಗರದಲ್ಲಿ ಕೊರೊನಾ ಆರ್ಭಟಕ್ಕೆ ಪೊಲೀಸ್ ಇಲಾಖೆ ಅಕ್ಷರಶಃ ನಲುಗಿ ಹೋಗಿದೆ. ಸಿಬ್ಬಂದಿಗೆ ಸೋಂಕು ತಗಲುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಠಾಣೆಗಳನ್ನು ಸೀಲ್ಡೌನ್ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
