ಬೆಂಗಳೂರು:
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ನಗರದ ತಮ್ಮ ನಿವಾಸದಲ್ಲಿ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಇನ್ನು, ಜು.31ರಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ ಪಂತ್ ನೇಮಕಗೊಂಡ ಆದೇಶ ಹೊರಬಿದ್ದ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರನ್ನು ಅಂದು ಭೇಟಿಯಾಗಿದ್ದರಿಂದ ಕಮಲ ಪಂತ್ ಅವರು ಕೂಡ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಲ್ಲದೇ, ಮುಖ್ಯಮಂತ್ರಿಗಳ ಸಂಪರ್ಕ ಹೊಂದಿದ್ದ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಹಾಗೂ ಮಾಜಿ ಸಚಿವ ಡಿ ಎನ್ ಜೀವರಾಜ್ ಅವರು ನಗರದ ಸಿಎಂ ನಿವಾಸ ಕಾವೇರಿಯಲ್ಲಿ ಅವರು ಅಧಿಕೃತವಾಗಿ ಭೇಟಿ ನೀಡಿದ ಹಿನ್ನಲೆಯಲ್ಲಿ ಇಬ್ಬರೂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಭಾನುವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರಿ ಪದ್ಮಾವತಿ ಅವರಿಗೆ ಕೊರೊನಾ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
