ನವದೆಹಲಿ :

ಭಾರತದಲ್ಲಿ ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 3,604 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 70 ಸಾವಿರ ದಾಟಿದೆ.
ಕೊರೋನ ಸೋಂಕು ಪೀಡಿತರ ಸಂಖ್ಯೆ 60 ಸಾವಿರದ ಗಡಿ ದಾಟಿದ ಎರಡೇ ದಿನದಲ್ಲಿ ಮತ್ತೊಂದು ಮೈಲುಗಲ್ಲು ತಲುಪಿದ್ದು, ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ದೇಶದ ಒಟ್ಟು ಸೋಂಕಿತರ ಸಂಖ್ಯೆ 70768.
ದೇಶದ ಒಟ್ಟು ಪ್ರಕರಣಗಳ ಮೂರನೇ ಒಂದರಷ್ಟು ಪ್ರಕರಣಗಳು ಮಹಾರಾಷ್ಟ್ರದಲ್ಲಿ ದಾಖಲಾಗಿವೆ. ಮಹಾರಾಷ್ಟ್ರ, ಗುಜರಾತ್, ತಮಿಳುನಾಡು ಹಾಗೂ ದೆಹಲಿ ಹೀಗೆ ನಾಲ್ಕು ರಾಜ್ಯಗಳಲ್ಲಿ ದೇಶದ ಒಟ್ಟು ಪ್ರಕರಣಗಳ ಶೇಕಡ 66ರಷ್ಟು ಪ್ರಕರಣಗಳು ದಾಖಲಾಗಿವೆ.
ಈ ನಡುವೆ ದೇಶದಲ್ಲಿ ಈ ವರೆಗೂ 2293 ಮಂದಿ ಮಹಾಮಾರಿ ವೈರಸ್’ಗೆ ಬಲಿಯಾಗಿದ್ದು, ದೇಶದಲ್ಲಿ ಆತಂಕ ಮತ್ತಷ್ಟು ಹೆಚ್ಚಾಗತೊಡಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ