ರಾಜ್ಯದ 8 ನಗರಗಳಲ್ಲಿ ನೈಟ್ ಕರ್ಫ್ಯೂ : ನೂತನ ಮಾರ್ಗಸೂಚಿ ಪ್ರಕಟ!!

ಬೆಂಗಳೂರು :

     ಕೊರೊನಾ ಸೋಂಕು ಹೆಚ್ಚಿರುವ ರಾಜ್ಯದ 8 ನಗರಗಳಲ್ಲಿ ನಾಳೆಯಿಂದ ಜಾರಿಯಾಗಲಿರುವ ನೈಟ್ ಕರ್ಫ್ಯೂಗೆ ನೂತನ ಮಾರ್ಗಸೂಚಿ ಪ್ರಕಟಗೊಂಡಿದೆ.

     ಎಪ್ರಿಲ್ 10ರಿಂದ 20ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ರಾಜ್ಯ ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ- ಮಣಿಪಾಲ್, ಬೀದರ್, ಕಲಬುರಗಿ ಮತ್ತು ತುಮಕೂರು ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.  

      ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರ ಗುರುವಾರ ಸಂಜೆ ಆದೇಶಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಇದೀಗ ಮಾರ್ಗಸೂಚಿ ಬಿಡುಗಡೆ ಮಾಡಿದೆ. 

ಮಾರ್ಗಸೂಚಿ :

  • ವೈದ್ಯಕೀಯ ಸೇವೆ, ಅತ್ಯವಶ್ಯಕ ಸೇವೆಗಳಿಗೆ ಅನುಮತಿ
  • ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಇಲ್ಲ
  • ಹೋಮ್ ಡೆಲಿವರಿ, ಇ ಕಾಮರ್ಸ್ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಅನುಮತಿ 
  • ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸಲು ಅವಕಾಶ
  • ರೈಲು, ಬಸ್ಸು ಮತ್ತು ವಿಮಾನದ ದೂರ ಪ್ರಯಾಣಕ್ಕೆ ಅನುಮತಿ 
  • ಪ್ರಯಾಣಿಕರು ಮನೆಯಿಂದ ನಿಲ್ದಾಣ್ಕಕ್ಕೆ ಅಥವಾ ನಿಲ್ದಾಣದಿಂದ ಮನೆಗೆ ಬರುವಾಗ ಅಧಿಕೃತ ಟಿಕೆಟ್ ಹೊಂದಿರುವುದು ಕಡ್ಡಾಯ

      ಈ ಆದೇಶ ಪಾಲನೆಯಲ್ಲಿ ಲೋಪವೆಸಗುವಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005ರ ಸೆಕ್ಷನ್ 51 ರಿಂದ 60 ಹಾಗೂ ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಅವಸಾರ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link