ಕಲ್ಬುರ್ಗಿ :
ರಾಜ್ಯದಲ್ಲಿ ಕೊವಿಡ್-19 ಗೆ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಸಾವನ್ನಪ್ಪಿರುವವರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ.
ಕಲ್ಬುರ್ಗಿಯ 80 ವರ್ಷದ ವೃದ್ಧ ಕಳೆದ 3 ವರ್ಷಗಳಿಂದ ಪಾರ್ಕಿನ್ಸನ್ ನಿಂದ ಬಳಲುತ್ತಿದ್ದರು. ಮೊನ್ನೆ ಜ್ವರ ಇದ್ದಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಬೆಳಗ್ಗೆ 9 ಗಂಟೆಗೆ ಅವರು ಮೃತಪಟ್ಟಿದ್ದು, ನಿನ್ನೆ ರಾತ್ರಿ ಪ್ರಯೋಗಾಲಯದ ಪರೀಕ್ಷಾ ವರದಿ ಬಂದಿದೆ. ವರದಿಯಲ್ಲಿ ವೃದ್ಧರಿಗೆ ಕೊರೊನಾ ಸೋಂಕಿರುವುದು ಖಚಿತವಾಗಿದೆ ಎಂದು ಸರ್ಕಾರ ಸ್ಪಷ ಪಡಿಸಿದೆ.
ಕಲ್ಪುರ್ಗಿಯಲ್ಲಿ ನಿನ್ನೆ ಬೆಳಗ್ಗೆ ಸಾವನ್ನಪ್ಪಿದ್ದ 80 ವರ್ಷದ ವ್ಯಕ್ತಿಯೊಬ್ಬರಿಗೆ #Covid19 ಸೋಂಕು ತಗುಲಿರುವುದು ಖಚಿತವಾಗಿದೆ. ಕಳೆದ 3 ವರ್ಷಗಳಿಂದ ಇವರು ಪಾರ್ಕಿನ್ಸನ್ ಖಾಯಿಲೆಯಿಂದ ಬಳಲುತ್ತಿದ್ದರು. #IndiaFightsCorona
— B Sriramulu (@sriramulubjp) April 21, 2020
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು, ಕಲ್ಬುರ್ಗಿಯಲ್ಲಿ ಸಾವನ್ನಪ್ಪಿದವರಿಗೆ ಸೋಂಕಿರುವುದು ಖಚಿತ ಪಟ್ಟಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 17ಕ್ಕೇರಿದ್ದು, ಕಲ್ಬುರ್ಗಿ ಜಿಲ್ಲೆಯಲ್ಲೇ 4 ಸಾವುಗಳಾಗಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ