ಕೊಪ್ಪಳ :
ಕೊರೊನಾ ಭಯದಿಂದ ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಕೋವಿಡ್ 19 ಆಸ್ಪತ್ರೆಯಲ್ಲಿ ನಡೆದಿದೆ.
26 ವರ್ಷದ ಕೊರೊನಾ ಸೋಂಕಿತ ವ್ಯಕ್ತಿ ಕೋವಿಡ್ ವಾರ್ಡ್ ಶೌಚಾಲಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೃತ ವ್ಯಕ್ತಿಯನ್ನು ಕೊಪ್ಪಳ ಜಿಲ್ಲೆಯ ಚಿಕ್ಕಬಿಡನಾಳ ಗ್ರಾಮದರು ಎಂದು ಗುರುತಿಸಲಾಗಿದ್ದು, ಕೊರೊನಾ ವೈರಸ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಭಯಕ್ಕೆ ಇಂದು ಬೆಳಗ್ಗಿನ ಜಾವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಮಾಹಿತಿ ನೀಡಿದ್ದಾರೆ.
ಆದರೆ, ಸೋಂಕಿತ ವ್ಯಕ್ತಿ ಕಳೆದ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ. ಸರಿಯಾದ ಚಿಕಿತ್ಸೆ ಸಿಗದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ