ಬೆಂಗಳೂರು:
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಪಾಸಿಟಿವ್ ಬಂದಿದೆ.
ಸ್ವತಃ ಈ ವಿಷಯವನ್ನು ಧ್ರುವ ಸರ್ಜಾ ಟ್ವೀಟ್ ಮೂಲಕ ಖಚಿಸಿಪಡಿಸಿದ್ದು, ನಾನು ಮತ್ತು ಪತ್ನಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು ವರದಿಯಲ್ಲಿ ಪಾಸಿಟಿವ್ ಬಂದಿದೆ. ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದು ಶೀಘ್ರವೇ ಗುಣಮುಖರಾಗುವ ವಿಶ್ವಾಸವಿದೆ. ಇದೀಗ ಸ್ವಲ್ಪ ಪ್ರಮಾಣದಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿದೆ.
My wife and I have both been tested positive for COVID-19 with mild symptoms and hence chosen to get ourselves hospitalised. I’m sure we’ll be back all fine! All those who were in close proximity with us please get yourselves tested and remain safe.
ಜೈ ಆಂಜನೇಯ ??— Dhruva Sarja (@DhruvaSarja) July 15, 2020
ನಮ್ಮ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ ಪರೀಕ್ಷೆ ಮಾಡಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ