ಬೆಂಗಳೂರು :
ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ಸೋಂಕು ದೃಢವಾದ ಬೆನ್ನಲ್ಲೇ ಸಿಎಂ ಗೃಹ ಕಚೇರಿ ಕೃಷ್ಣಾದ 11 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಅಲ್ಲದೇ ಅವರ ನಿವಾಸದ ಅಡುಗೆ ಕೆಲಸದಾತ, ಕಾರು ಚಾಲಕ ಸೇರಿ 6 ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಉಳಿದವರ ವರದಿಯನ್ನು ನಿರೀಕ್ಷಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತ ಸಿಬ್ಬಂದಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
