ಚಿಕ್ಕಮಗಳೂರು : ಕೊರೊನಾದಿಂದ ತಾಯಿ ನಿಧನ : ಮಗನಿಗೂ ಪಾಸಿಟಿವ್!!

ಚಿಕ್ಕಮಗಳೂರು :

      ಕೊರೊನಾದಿಂದ ಸಾವನ್ನಪ್ಪಿದ ವೃದ್ಧೆಯ 52 ವರ್ಷದ ಮಗನಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

      ಜೂ.18ರಂದು 72 ವರ್ಷದ ವೃದ್ದೆಯೊಬ್ಬರು ಸಾವನಪ್ಪುವ ಮೂಲಕ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಮೊದಲ ಸಾವು ದಾಖಲಾಗಿದೆ.ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ವೃದ್ಧಗೆ ಕೊರೊನಾ ಸೋಂಕು ತಗುಲಿತ್ತು ಎಂದು ಹೇಳಲಾಗುತ್ತಿದೆ. ವೃದ್ದೆಯ ಸಂಪರ್ಕದಿಂದ ಪುತ್ರನಿಗೆ ಕೊರೊನಾ ಸೋಂಕು ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. 

     ಬುಧವಾರ ಸಂಜೆ ಸುಮಾರಿಗೆ ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆಗೆ ವೃದ್ಧೆಯನ್ನು ದಾಖಲು ಮಾಡಲಾಗಿತ್ತು. ಗುರುವಾರ ಸಂಜೆ ವೇಳೆಗೆ ಮೃತ ವೃದ್ಧೆಗೆ ಸೋಂಕು‌ ತಗುಲಿರುವುದು ದೃಢ ಪಟ್ಟಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮಧ್ಯಾಹ್ನ 12.30ರ ಸುಮಾರಿಗೆ ವೃದ್ಧೆ ಮೃತರಾಗಿದ್ದರು. 

     ಈಗ ವೃದ್ಧೆಯ ಟ್ರಾವೆಲ್ ಹಿಸ್ಟರಿ ಜಿಲ್ಲೆಯಲ್ಲಿ ಭಯ ಹುಟ್ಟಿಸಿದ್ದರೇ, ಇತ್ತ ಬೀರೂರು, ಅಜ್ಜಂಪುರ ಭಾಗದ ಜನರಲ್ಲಿ ಆತಂಕ ಮನೆ ಮಾಡಿದೆ.   

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap