ಹುಬ್ಬಳ್ಳಿ :
ಕೊರೊನಾ ಸೋಂಕು ದೃಢಪಟ್ಟಿದ್ದ ಆರೋಪಿ ಇಂದು ಮುಂಜಾನೆ ಕಿಮ್ಸ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.
ಹುಬ್ಬಳ್ಳಿಯ ಉಪನಗರ ಠಾಣೆಯ ಪೊಲೀಸರು ಕಳ್ಳತನದ ಆರೋಪದ ಮೇರೆಗೆ ಒಬ್ಬನನ್ನು ಬಂಧಿಸಿದ್ದರು. ಕಳೆದ ಎರಡು ದಿನಗಳ ಹಿಂದೆ ಆತನಲ್ಲಿ ಅನಾರೋಗ್ಯ ಹಿನ್ನಲೆಯಲ್ಲಿ ಕಿಮ್ಸ್ ಗೆ ದಾಖಲು ಮಾಡಲಾಗಿತ್ತು. ವೈದ್ಯಕೀಯ ತಪಾಸಣೆ ವೇಳೆ ಅವರಿಗೆ ಸೋಂಕು ತಗುಲಿದ್ದು ದೃಢಪಟ್ಟಿತ್ತು. ಆದರೆ ಇಂದು ಮುಂಜಾನೆ 5.30ರ ಸುಮಾರಿಗೆ ಸೋಂಕಿತ ಆರೋಪಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.
ಇಬ್ಬರ ಪೊಲೀಸ್ ಸಿಬ್ಬಂದಿ ಕಾವಲಿಗಿದ್ದರೂ ಅವರ ಕಣ್ಣು ತಪ್ಪಿಸಿ ಈ ಚಾಲಾಕಿ ಪರಾರಿಯಾಗಿದ್ದು, ನಗರದ ಜನರಲ್ಲಿ ಮತ್ತಷ್ಟು ಆತಂಕ ಶುರುವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
