ಮಾಜಿ ಪ್ರಧಾನಿ ದೇವೇಗೌಡ ಹಾಗೂ ಪತ್ನಿಗೆ ಕೊರೋನಾ ದೃಢ!!!

ಬೆಂಗಳೂರು :

     ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

      ಈ ಹಿನ್ನಲೆಯಲ್ಲಿ ದೇವೇಗೌಡ ದಂಪತಿಯನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರುಗಳಿಗೆ ಯಾವುದೇ ಕೊರೊನಾ ಗುಣಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದಾರೆಂದು ಹೇಳಲಾಗಿದೆ.

     ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಕರ್ನಾಟಕದಲ್ಲೂ ತನ್ನ ಆರ್ಭಟ ತೋರಿಸುತ್ತಿದೆ. ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಇದರ ನಿಯಂತ್ರಣಕ್ಕೆ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ