ಬೆಂಗಳೂರು :
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದು ಮತ್ತೆ ಹೊಸದಾಗಿ 10 ಕೊರೊನಾ ಸೋಂಕು ಪತ್ತೆಯಾಗಿದೆ.
ನಿನ್ನೆ ಕರ್ನಾಟಕದಲ್ಲಿ ಕೇವಲ 181 ಸೋಂಕಿತರ ಸಂಖ್ಯೆ ಇತ್ತು. ಇಂದು ಮತ್ತೆ 10 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 2, ಬಾಗಲಕೋಟೆಯಲ್ಲಿ 3, ಮೈಸೂರು ಜಿಲ್ಲೆಯಲ್ಲಿ 2, ಚಿಕ್ಕಬಳ್ಳಾಪುರ, ಬಳ್ಳಾರಿ, ಬೆಳಗಾವಿಯಲ್ಲಿ ತಲಾ ಒಬ್ಬರಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ.
ಇನ್ನು ಕರ್ನಾಟಕದಲ್ಲಿ ಇಂದು ಗದಗದಲ್ಲಿ ಮೊದಲ ಬಲಿಯಾಗಿದ್ದು, ಕರ್ನಾಟಕದಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕು ಪೀಡಿತರ ಸಂಖ್ಯೆ 191ಕ್ಕೆ ಏರಿಕಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ