ತುಮಕೂರು : 5 ರಿಂದ 7ಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ!!

ತುಮಕೂರು : 

        ತುಮಕೂರಿನಲ್ಲಿ ಇತ್ತೀಚೆಗೆ ಸಾವನ್ನಪ್ಪಿದ್ದ ವೃದ್ದನ ಸಂಪರ್ಕದಲ್ಲಿದ್ದ ಇಬ್ಬರು ವ್ಯಕ್ತಿಗಳಿಗೆ ಕೊರೋನಾ ಸೋಂಕು ಇರುವುದು ಧೃಡಪಟ್ಟಿದೆ. 

      ಈಗಾಗಲೇ ಮೃತಪಟ್ಟ P – 535 ಪೇಷಂಟ್ ನಿಂದ ಅವರ ಪತ್ನಿ P-553 ಈ ಸೋಂಕು ತಗಲಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಈಗ ಅವರ ಸಂಪರ್ಕದಲ್ಲಿದ್ದ ಪಕ್ಕದ ಮನೆಯ ದಂಪತಿಗಳಾದ P -591 (40 ವರ್ಷ ಗಂಡು) ಮತ್ತು P-592 (29 ವರ್ಷ ಹೆಣ್ಣು) ಕೊರೋನ ವೈರಸ್ ಪಾಸಿಟಿವ್ ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ರವರು ತಿಳಿಸಿದ್ದಾರೆ.

     ಇನ್ನು ಇವರಿಗೆ ಕೋವಿಡ್ 19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಸಹಾ ಜಿಲ್ಲಾಧಿಕಾರಿಗಳು ತಿಳಿಸಿದ್ದು, ಸಣ್ಣ ಮಕ್ಕಳು ಮತ್ತು ವಯಸ್ಸಾದವರು ಯಾರೂ ಹೊರಗೆ ಓಡಾಡಬಾರದು ಮನೆಯಲ್ಲಿ ಇದ್ದು ಈ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಸಂಪೂರ್ಣವಾದ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.

     ಈ ಮೂಲಕ ಜಿಲ್ಲೆಯಲ್ಲಿ ಒಟ್ಟಾರೆಯಾಗಿ ಕೊರೊನಾ ಸೋಂಕಿತರ ಸಂಖ್ಯೆ 7 ಕ್ಕೆ ಏರಿಕೆಯಾಗಿದ್ದು, ಇನ್ನೂ ಆರೆಂಜ್ ಜೋನ್ ನಲ್ಲಿರುವ ಜಿಲ್ಲೆಯಲ್ಲಿ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ