ತುಮಕೂರು :
ನಗರದಲ್ಲಿ ಮತ್ತೊಂದು ಕೊರೊನಾ ಪ್ರಕರಣ ಬೆಳಕಿಗೆ ಬಂದಿದ್ದು, ಸೋಂಕಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿರುವ ಕೋವಿಡ್ 19 ಕುರಿತ ಇಂದಿನ ವರದಿಯಲ್ಲಿ ತುಮಕೂರಿನ ಒಬ್ಬ ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದು ಜಿಲ್ಲೆಯ ಜನರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.
ಬಿಬಿಎಂಪಿ ಕಂಟೈನ್ಮೆಂಟ್ ಜೋನ್ ವಾರ್ಡ್ ಸಂಖ್ಯೆ135ರ ಸಂಪರ್ಕದಿಂದಾಗಿ ತುಮಕೂರಿನ 45 ವರ್ಷದ ಪುರುಷ P-764 ನಿಗೆ ಸೋಂಕು ಕಾಣಿಸಿಕೊಂಡಿದೆ. ನಗರದ ಜಿಲ್ಲಾಸ್ಪತ್ರೆಯಲ್ಲಿ ಈ ವ್ಯಕ್ತಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎನ್ನಲಾಗಿದೆ.
ಈ ಮೂಲಕ ಜಿಲ್ಲೆಯಲ್ಲಿ ಒಟ್ಟಾರೆಯಾಗಿ ಕೊರೊನಾ ಸೋಂಕಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದ್ದು, ಇನ್ನೂ ಆರೆಂಜ್ ಜೋನ್ ನಲ್ಲಿರುವ ಜಿಲ್ಲೆಯಲ್ಲಿ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ