ಹುಬ್ಬಳ್ಳಿ :
ಕೊರೊನಾ ವೈರಸ್ ಪಾಸಿಟಿವ್ ಕಾಣಿಸಿಕೊಂಡಿದ್ದ ಧಾರವಾಡ ನಗರದ 33 ವರ್ಷದ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದು ಕಿಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದು, ಮಾರ್ಚ್ 12 ರಂದು ಆಸ್ಟ್ರೇಲಿಯಾದಿಂದ ದುಬೈ, ಮಸ್ಕತ್, ಪಣಜಿ ಮಾರ್ಗವಾಗಿ ಧಾರವಾಡ ನಗರಕ್ಕೆ ಬಂದಿದ್ದ 33 ವರ್ಷದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.
ಕಿಮ್ಸ್ ನಲ್ಲಿ ಉತ್ತಮ ಚಿಕಿತ್ಸೆ ನೀಡಿದ ಬಳಿಕ ಕೊರೊನಾ ವೈರಸ್ ನಿಂದ ಚೇತರಿಸಿಕೊಂಡಿದ್ದು, ಇವರ ಗಂಟಲು ದ್ರವದ ಪ್ರಯೋಗಾಲದಯ ಮಾದರಿಯನ್ನು ಮಾರ್ಚ್ 31 ಹಾಗೂ ಏಪ್ರಿಲ್ 3 ರಂದು ಎರಡು ಬಾರಿ ಮತ್ತೆ ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಎರಡು ಸಲ ನೆಗೆಟಿವ್ ವರದಿ ಬಂದಿದೆ. ಆದ್ದರಿಂದ ನಿನ್ನೆ ಸಂಜೆ ಕಿಮ್ಸ್ ನಿಂದ ಬಿಡುಗಡೆ ಮಾಡಿ ಮನೆಗೆ ಕಳುಹಿಸಿ ಕೊಡಲಾಯಿತು ಎಂದು ತಿಳಿಸಿದ್ದಾರೆ.
ಈ ಪ್ರಕರಣ ಧಾರವಾಡ ಜಿಲ್ಲೆಯ ಮೊದಲ ಪ್ರಕರಣವಾಗಿತ್ತು, ರಾಜ್ಯದ 21 ನೇ ಪ್ರಕರಣವಾಗಿದ್ದರಿಂದ ಪಿ.21 ಎಂದು ಗುರುತಿಸಲಾಗುತ್ತಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ