ಬೆಂಗಳೂರು :
ರಾಜ್ಯದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಂಡ್ಯ ಜಿಲ್ಲೆಯ ಮಳವಳ್ಳಿಯ ಒಂದೇ ಕುಟುಂಬದ 3 ಮಂದಿಗೆ ಸೋಂಕು ದೃಢಪಟ್ಟಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯದಲ್ಲಿನ ಕೊರೊನಾ ಸೋಂಕಿತ ಪ್ರಕರಣಗಳ ಕುರಿತಂತೆ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಅನ್ನು ಬಿಡುಗಡೆ ಮಾಡಿದೆ. ಈ ಬುಲೆಟಿನ್ ನಲ್ಲಿ ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 15 ಜನರಿಗೆ ಕೊರೊನಾ ವೈರಸ್ ಸೋಂಕಿರುವುದಾಗಿ ತಿಳಿಸಿದೆ.
ಇನ್ನು ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಇಂದು ಒಂದೇ ದಿನ ಮೂವರಿಗೆ ಕೊರೊನಾ ವೈರಸ್ ಪತ್ತೆಯಾಗಿದೆ. ಇವರು ಒಂದೇ ಕುಟುಂಬದವರಾಗಿದ್ದು, ಇವರು 179 ಸೋಂಕಿತನ ಜೊತೆ ಸಂಪರ್ಕದಲ್ಲಿದ್ದರು. ಮಳವಳ್ಳಿಯ 60 ವರ್ಷದ ವೃದ್ಧೆ, 18 ವರ್ಷದ ಯುವಕ, 8 ವರ್ಷದ ಬಾಲಕಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ