ದೇವನಹಳ್ಳಿ :
ಕೊವಿಡ್19 ವಿರುದ್ಧ ಹಗಲಿರುಳು ಹೋರಾಡುತ್ತಿರುವ ಜಿಲ್ಲಾಧಿಕಾರಿಗೆ ಕರೋನಾ ಮಹಾಮಾರಿ ವಕ್ಕರಿಸಿದೆ ಎನ್ನಲಾಗಿದೆ.
ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದರು. ಅವರ ಗಂಟಲು ದ್ರವವನ್ನು ಪರೀಕ್ಷೆಗೆಂದು ಲ್ಯಾಬ್ಗೆ ಕಳುಹಿಸಲಾಗಿತ್ತು. ಹೀಗಾಗಿ ಮುಂಜಾಗೃತ ಕ್ರಮವಾಗಿ ಅವರು ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಇವತ್ತು ಕೊರೊನಾ ರಿಪೋರ್ಟ್ ಬಂದಿದ್ದು, ಜಿಲ್ಲಾಧಿಕಾರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಬೆಂಗಳೂರು ನಗರ ಡಿಸಿ ಕಚೇರಿಯಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ನೆಲಮಂಗಲ ತಹಶೀಲ್ದಾರ್ ಸಹ ಭಾಗವಹಿಸಿದ್ದರು. ಈ ಮೊದಲು ತಹಶೀಲ್ದಾರ್ ಗೆ ಸೋಂಕು ದೃಢಪಟ್ಟಿದೆ. ಬಹುಶಃ ತಹಶೀಲ್ದಾರ್ ಅವರಿಂದಲೇ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗೆ ಸೋಂಕು ತಗುಲಿರಬಹುದು ಎಂಬ ಆತಂಕ ಕಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
