ಮಂಡ್ಯ:
ಮಂಡ್ಯದ ಜಲಭಗೀರಥ 85 ವರ್ಷದ ಕಾಮೇಗೌಡರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ.
ಹೌದು, ಕೆಲ ದಿನಗಳ ಹಿಂದೆ ಬಲಗಾಲು ಗಾಯವಾಗಿ ನೋವಿನಿಂದ ಮಳವಳ್ಳಿಯ ತಾಲೂಕು ಆಸ್ಪತ್ರೆ, ಮಂಡ್ಯ ಜಿಲ್ಲಾಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದ ಕಾಮೇಗೌಡರಿಗೆ ಇತ್ತೀಚಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಆಗ ಅವರನ್ನು ಕೊರೋನಾ ಸೋಂಕು ಪರೀಕ್ಷೆಗೆ ಒಲಪಡಿಸಲಾಗಿದ್ದು ಇದೀಗ ಕಾಮೇಗೌಡರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ.
ಸಧ್ಯ ಕಾಮೇಗೌಡರು ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಹೊಂದುತ್ತಿದ್ದಾರೆ.
ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಾಮೇಗೌಡರ ಮನೆಯ ಬೀದಿಯನ್ನು ಸೀಲ್ಡೌನ್ ಮಾಡಿದ್ದು, ಕುಟುಂಬ ಸದಸ್ಯರನ್ನು ಕ್ವಾರಂಟೈನ್ ಮಾಡಲಾಗಿದೆ. ಕಾಮೇಗೌಡರನ್ನು ಮಿಮ್ಸ್ ಐಸೋಲೇಷನ್ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ