ಬಳ್ಳಾರಿ:
ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ವಾರ್ಡಿನಲ್ಲಿ ಕಾರ್ಯನಿರ್ವಹಿಸಿರುವ ಆರೋಗ್ಯ ಸಿಬ್ಬಂದಿ ಕೊರೋನಾ ವಾರಿಯರ್ ಗೆ ಕೊರೊನಾ ಸೋಂಕು ತಗುಲಿದೆ.
ಬಳ್ಳಾರಿ ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೊಲೇಷನ್ ವಾರ್ಡಿನಲ್ಲಿ ವೈದ್ಯರು, ನರ್ಸ್ ಗಳು ಸೇರಿ 14 ಜನ 14 ದಿನಗಳ ಕಾಲ ಕಾರ್ಯ ನಿರ್ವಹಿಸಿದ್ದರು.
ನಂತರ ಅವರನ್ನು ಕ್ವಾರಂಟೈನ್ ಗೆ ಕಳುಹಿಸುವ ಮುನ್ನ ಪರೀಕ್ಷೆ ಮಾಡಿದಾಗ. ಅವರಲ್ಲಿ ಓರ್ವ ಅರೆ ವೈದ್ಯಕೀಯ ವ್ಯಕ್ತಿಗೆ ಪಾಸಿಟಿವ್ ಬಂದಿದೆ.
ಪಿಪಿಎ ಕಿಟ್ ಬಳಕೆ ಸೇರಿದಂತೆ ಎಲ್ಲಾ ರೀತಿ ಮುಂಜಾಗ್ರತಾ ಕ್ರಮ ತೆಗೆದು ಕೊಂಡರೂ ಸೋಂಕು ತಗಲಿರುವ ಬಗ್ಗೆ ಪರಾಮರ್ಶೆ ಮಾಡಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹೇಳಿದ್ದಾರೆ. ಉಳಿದ 13 ಜನರಲ್ಲಿ ನೆಗೆಟಿವ್ ಬಂದಿದೆ. ಆದರೂ ಅವರಲ್ಲೂ ಆತಂಕ ಶುರು ಆಗಿದೆ.
ಈ ಒಂದು ಹೊಸ ಪ್ರಕರಣದಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3 7 ಕ್ಕೇರಿದೆ. 21 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ