ಬೆಂಗಳೂರು:
ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ವಿಷಯವನ್ನು ಸ್ವತಃ ಗೃಹ ಸಚಿವರು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ.
ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿದೆ. ಹೀಗಾಗಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲ. ನಾನು ಆರೋಗ್ಯವಾಗಿದ್ದೇನೆ. ಮನೆಯಲ್ಲಿಯೇ ಪ್ರತ್ಯೇಕವಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಗೃಹಸಚಿವರು ಕೋರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/20_12_2019-basavaraj-bommai_19861403.gif)